ಶನಿವಾರ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ನಾನಾ
Byv


ಬೆಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯಗಳು, ವ್ಯಾಪಕ ಭ್ರಷ್ಟಾಚಾರ, ರಾಜ್ಯದಲ್ಲಿನ ಹೆಚ್ಚುತ್ತಿರುವ ಅರಾಜಕತೆ, ರೈತರ ಗಂಭೀರ ಸಮಸ್ಯೆಗಳು ಹಾಗೂ ಡ್ರಗ್ಸ್ ಹಾವಳಿ ಸೇರಿದಂತೆ ಹಲವು ಜನವಿರೋಧಿ ವಿಚಾರಗಳನ್ನು ಮುಂದಿಟ್ಟುಕೊಂಡು, ರಾಜ್ಯದೆಲ್ಲೆಡೆ ನಾನಾ ಹಂತಗಳಲ್ಲಿ ಹೋರಾಟ ನಡೆಸಲು ಬಿಜೆಪಿ ಈಗಾಗಲೇ ತೀರ್ಮಾನಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರ್ಬಲ ಆಡಳಿತದಿಂದ ಅಪರಾಧ, ಮಾದಕ ವಸ್ತು ದಂಧೆ ಹಾಗೂ ಸಮಾಜಘಾತುಕ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನರ ಧ್ವನಿಯಾಗಲು ಶನಿವಾರ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದ ಮೂಲಕ ಸರ್ಕಾರದ ವೈಫಲ್ಯಗಳನ್ನು ಬಯಲಿಗೆಳೆದು, ಜನರ ಹಕ್ಕುಗಳಿಗಾಗಿ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.

ರಾಜ್ಯದ ಜನತೆ, ರೈತರು, ಯುವಕರು ಹಾಗೂ ಮಹಿಳೆಯರು ಅನುಭವಿಸುತ್ತಿರುವ ಅನ್ಯಾಯದ ವಿರುದ್ಧ ಈ ಹೋರಾಟ ನಿರ್ಣಾಯಕವಾಗಲಿದೆ. ಕಾಂಗ್ರೆಸ್‌ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande