
ಮುಂಬಯಿ, 15 ಜನವರಿ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳಿಗೆ ಗುರುವಾರ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7.30ರಿಂದಲೇ ಮತಗಟ್ಟೆಗಳಲ್ಲಿ ಮತದಾರರ ಉದ್ದನೆಯ ಸಾಲುಗಳು ಕಂಡು ಬಂದಿವೆ. ಸಾಮಾನ್ಯ ನಾಗರಿಕರ ಜೊತೆಗೆ, ಅನೇಕ ಪ್ರಸಿದ್ಧ ಚಲನಚಿತ್ರ ತಾರೆಯರು ಕೂಡ ಪ್ರಜಾಪ್ರಭುತ್ವದ ಈ ಮಹಾ ಉತ್ಸವದಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಮುಂಬೈನ ಗಾಂಧಿ ಶಿಕ್ಷಣ ಭವನದಲ್ಲಿರುವ ಮತಗಟ್ಟೆಗೆ ಭೇಟಿ ನೀಡಿ ಮತ ಚಲಾಯಿಸಿದರು.
ಮತದಾನ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ. ಮುಂಬೈ ನಿವಾಸಿಗಳಾಗಿ, ಇಂದು ನಮ್ಮ ನಗರದ ನಿಯಂತ್ರಣ ನಮ್ಮ ಕೈಯಲ್ಲಿದೆ. ಪ್ರತಿಯೊಬ್ಬರೂ ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು. ನಾವು ಮುಂಬೈನ ನಿಜವಾದ ಹೀರೋಗಳಾಗಬೇಕಾದರೆ ಕೇವಲ ಮಾತುಕತೆ ಸಾಕಾಗದು, ಮತಗಟ್ಟೆಗೆ ಬಂದು ಮತ ಚಲಾಯಿಸುವುದೇ ನಿಜವಾದ ಹೊಣೆಗಾರಿಕೆ” ಎಂದು ಹೇಳಿದರು.
ಇದೇ ವೇಳೆ ಮಾಜಿ ಕ್ರಿಕೆಟ್ ತಾರೆ ಸಚಿನ ತೆಂಡೂಲ್ಕರ್ ಕೂಡ
ಮತದಾನ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa