
ತುಮಕೂರು, 15 ಜನವರಿ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ತುಮಕೂರಿನಲ್ಲಿ ಅಯೋಜಿಸಿರುವ 'ಕರ್ನಾಟಕ ಕ್ರೀಡಾಕೂಟ'ಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ.
ಜನವರಿ 16ರಿಂದ ಜನವರಿ 22ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 27 ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಐದು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತೆ ಪರೀಶಿಲಿಸಿ ಮಾತನಾಡಿದ ಅವರು,
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಕನ್ನಡದ ಹೆಸರಾಂತ ಸಂಗೀತ ಸಂಯೋಜಕ ಮತ್ತು ಸಂಗೀತ ನಿರ್ದೇಶಕರಾದ ಗುರು ಕಿರಣ್ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜನವರಿ 22ರಂದು ಸಂಜೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, ಸಮಾರೋಪ ಭಾಷಣ ಮಾಡಲಿದ್ದಾರೆ. ಕ್ರೀಡಾಕೂಟ ವಿಜೃಂಭಣೆಯಿಂದ ನಡೆಸಲು ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಹಿನ್ನಲೆಯಲ್ಲಿ ಕ್ರೀಡಾಂಗಣ ವ್ಯವಸ್ಥೆ, ಕ್ರೀಡಾಪಟುಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಸೇರಿದಂತೆ ಮುಂತಾದ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa