ಚಿಕ್ಕಮಗಳೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ
ಚಿಕ್ಕಮಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ಲಿಂಗದಹಳ್ಳಿ ಹಾಗೂ ಉಡೇವಾ ಸುತ್ತಮುತ್ತ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಟ ನಡೆಸುತ್ತಿದ್ದ ಪರಿ
Cheetah


ಚಿಕ್ಕಮಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.

ಲಿಂಗದಹಳ್ಳಿ ಹಾಗೂ ಉಡೇವಾ ಸುತ್ತಮುತ್ತ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಟ ನಡೆಸುತ್ತಿದ್ದ ಪರಿಣಾಮ ಗ್ರಾಮಸ್ಥರಲ್ಲಿ ಭಾರೀ ಆತಂಕ ಉಂಟಾಗಿತ್ತು.

ಕಳೆದ ಕೆಲವು ದಿನಗಳಲ್ಲಿ ಈ ಚಿರತೆ 8ಕ್ಕೂ ಹೆಚ್ಚು ನಾಯಿಗಳನ್ನು ಬೇಟೆಯಾಡಿದ್ದರಿಂದ ಜನರು ಮನೆಯಿಂದ ಹೊರಬರಲು ಸಹ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಚಿರತೆ ಸಂಚಾರದಿಂದ ಜೀವ ಭದ್ರತೆ ಬಗ್ಗೆ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯ ಇಲಾಖೆಗೆ ಕೂಡಲೇ ಚಿರತೆಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದರು.

ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಬೋನು ಅಳವಡಿಸಿದ್ದು, ಇದೀಗ ಆತಂಕ ಸೃಷ್ಟಿಸಿದ್ದ ಚಿರತೆ ಯಶಸ್ವಿಯಾಗಿ ಸೆರೆಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande