
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯದ ಕಾರಾಗೃಹ ವ್ಯವಸ್ಥೆಯ ಸುಧಾರಣೆಗಳ ಕುರಿತಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಇಂದು ಸಲ್ಲಿಸಿತು.
ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ, ಭದ್ರತಾ ಕ್ರಮಗಳ ಬಲಪಡಿಕೆ ಹಾಗೂ ಕಾರಾಗೃಹ ಸುಧಾರಣಾ ಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಿತಿಯು ಹಲವು ಮಹತ್ವದ ಶಿಫಾರಸುಗಳನ್ನು ವರದಿಯಲ್ಲಿ ಮಾಡಿದೆ. ಈ ಶಿಫಾರಸುಗಳನ್ನು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಎಡಿಜಿಪಿ ಆರ್. ಹಿತೇಂದ್ರ, ಐಜಿಪಿ ಸಂದೀಪ್ ಪಾಟೀಲ್, ಪೊಲೀಸ್ ಅಧೀಕ್ಷಕರಾದ ಸಿ.ಬಿ. ರಿಷ್ಯಂತ್ ಹಾಗೂ ಅಮರನಾಥ್ ರೆಡ್ಡಿ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa