ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಬೊಮ್ಮಾಯಿ
ಎದುರಿಸುವುದಿಲ್ಲ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಬೊಮ್ಮಾಯಿ


ದಾವಣಗೆರೆ, 15 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಯಾರಿಗೂ ಯಾರದೇ ಭಯ ಇಲ್ಲ. ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

ದಾವಣಗೆರೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ನಾಯಕ ಆವಾಜ್ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೃಹ ಸಚಿವರಿಗೆ ಪೊಲೀಸರ ಮೇಲೆ‌ ನಿಯಂತ್ರಣ ಇಲ್ಲ. ಪೊಲೀಸ್ ಠಾಣೆಗಳು ಕಲೆಕ್ಷನ್ ಸೆಂಟರ್‌ಗಳಾಗಿವೆ. ಯಾರ ಭಯ ಯಾರಿಗೂ ಇಲ್ಲ. ಕಾಂಗ್ರೆಸ್ ನಾಯಕರು ಘನತೆ ಗೌರವ ಮೀರಿ ಅತ್ಯಂತ ಕೀಳು ಮಟ್ಟದ ಭಾಷೆ ಬಳಸುತ್ತಿದ್ದಾರೆ. ಅಧಿಕಾರಿಗಳು, ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಎಚ್ಚರಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಹೈಕಮಾಂಡ್ ಜೊತೆ ಮಾತನಾಡಿ ಶೀಘ್ರ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಮಾಡುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ಆ ಪ್ರಶ್ನೆಯೇ ಎದುರಿಸುವುದಿಲ್ಲ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಕೆಲಸ ಮಾಡುತ್ತಿದ್ದಾರೆ, ಸಂಘಟನೆ ನಡೆಯುತ್ತಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande