ಕ್ರೀಡಾಶಾಲೆ, ನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ
ಶಿವಮೊಗ್ಗ, 15 ಜನವರಿ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಗೆ 2026-27 ನೇ ಸಾಲಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆಯನ್ನು ನಡೆಸಲಾಗುವುದು. ಅಥ್ಲೆಟಿಕ್ಸ್, ಹಾಕ
ಕ್ರೀಡಾಶಾಲೆ, ನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ


ಶಿವಮೊಗ್ಗ, 15 ಜನವರಿ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಗೆ 2026-27 ನೇ ಸಾಲಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆಯನ್ನು ನಡೆಸಲಾಗುವುದು.

ಅಥ್ಲೆಟಿಕ್ಸ್, ಹಾಕಿ, ಫುಟ್‌ಬಾಲ್, ಕುಸ್ತಿ ಕ್ರೀಡೆಗಳಲ್ಲಿ ಆಯಾ ತಾಲ್ಲೂಕುಗಳಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಜ.16 ರಂದು ತೀರ್ಥಹಳ್ಳಿ ತಾಲ್ಲೂಕಿಗೆ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ಸಾಗರ ತಾಲ್ಲೂಕಿಗೆ ಸಾಗರ ತಾಲ್ಲೂಕು ಕ್ರೀಡಾಂಗಣ, ಹೊಸನಗರ ತಾಲ್ಲೂಕಿಗೆ ಹೊಸನಗರ ತಾಲ್ಲೂಕು ಕ್ರೀಡಾಂಗಣ. ಆ.19 ರಂದು ಸೊರಬ ತಾಲ್ಲೂಕಿಗೆ ಸ.ಪ.ಪೂ ಕಾಲೇಜು ಆನವಟ್ಟಿ, ಶಿಕಾರಿಪುರ ತಾಲ್ಲೂಕಿಗೆ ಶಿಕಾರಿಪುರ ತಾಲ್ಲೂಕು ಕ್ರೀಡಾಂಗನ. ಭದ್ರಾವತಿ ತಾಲ್ಲೂಕಿಗೆ ಕನಕ ಮಂಟಪ ಮೈದಾನ ಭದ್ರಾವತಿ. ಹಾಗೂ ಜ.24 ರಂದು ಶಿವಮೊಗ್ಗ ತಾಲ್ಲೂಕಿಗೆ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಆಯ್ಕೆ ನಡೆಸಲಾಗುವುದು.

ಆಯ್ಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಶಾಲಾ ಮುಖ್ಯಸ್ಥರಿಂದ ಜನ್ಮ ದಿನಾಂಕ ಪ್ರಮಾಣ ಪತ್ರ ಹಾಗೂ ವ್ಯಾಸಂಗ ಮಾಡುತ್ತಿರುವ ತರಗತಿಯ ವಿವರಗಳನ್ನೊಳಗೊಂಡ ದೃಢೀಕರಣ ಪತ್ರವನ್ನು ಆಯ್ಕೆಯ ದಿನದಂದು ಕಡ್ಡಾಯವಾಗಿ ತಮ್ಮೊಂದಿಗೆ ತರತಕ್ಕದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande