ಸಿದ್ದರಾಮಾನಂದ ಸ್ವಾಮೀಜಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶ್ರೀರಾಮುಲು
ರಾಯಚೂರು, 15 ಜನವರಿ (ಹಿ.ಸ.) : ಆ್ಯಂಕರ್ : ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾಗಿದ್ದ, ಬ್ರಹ್ಮೈಕ್ಯರಾದ ಸಿದ್ದರಾಮಾನಂದ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಾಜಿ ಸಚಿವ ಶ್ರೀರಾಮುಲು ಅವರು ಪಡೆದರು. ಸ್ವಾಮೀಜಿಯವರ ಅಗಲಿಕೆಗ
Ramulu


ರಾಯಚೂರು, 15 ಜನವರಿ (ಹಿ.ಸ.) :

ಆ್ಯಂಕರ್ : ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾಗಿದ್ದ, ಬ್ರಹ್ಮೈಕ್ಯರಾದ ಸಿದ್ದರಾಮಾನಂದ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಾಜಿ ಸಚಿವ ಶ್ರೀರಾಮುಲು ಅವರು ಪಡೆದರು.

ಸ್ವಾಮೀಜಿಯವರ ಅಗಲಿಕೆಗೆ ತೀವ್ರ ಶೋಕ ವ್ಯಕ್ತಪಡಿಸಿದ ಶ್ರೀರಾಮುಲು ಅವರು, ಧಾರ್ಮಿಕ ಸೇವೆಗಳ ಜೊತೆಗೆ ಸಮಾಜದ ಏಳಿಗೆಯಿಗಾಗಿ ಅಪಾರ ಕಾಳಜಿ ಮತ್ತು ಶ್ರದ್ಧೆ ಹೊಂದಿದ್ದ ಮಹಾನ್ ಸಂತನೊಬ್ಬರನ್ನು ನಾಡು ಕಳೆದುಕೊಂಡಿದೆ. ಅವರ ಅಗಲಿಕೆ ತುಂಬಲಾರದ ನಷ್ಟವಾಗಿದ್ದು, ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande