ರಾಯಚೂರು : ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ
ರಾಯಚೂರು, 15 ಜನವರಿ (ಹಿ.ಸ.) : ಆ್ಯಂಕರ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಸಮೀಪದ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ಅವರು ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಇದೇ ಜ.12, 13 ಹಾಗೂ 14ರಂದು ಅದ್ದೂರಿಯಾ
Swamiji


ರಾಯಚೂರು, 15 ಜನವರಿ (ಹಿ.ಸ.) :

ಆ್ಯಂಕರ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಸಮೀಪದ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ಅವರು ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ.

ಇದೇ ಜ.12, 13 ಹಾಗೂ 14ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ, ಹಾಲುಮತ ಸಾಹಿತ್ಯ ಸಮ್ಮೇಳನ ಮತ್ತು ಹಾಲುಮತ ಪೂಜಾರಿಗಳ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ್ದ ಸ್ವಾಮೀಜಿ, ಕಳೆದ ಒಂದು ವಾರದಿಂದ ವಿಶ್ರಾಂತಿ ಇಲ್ಲದೆ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದರು. ಇದರ ಪರಿಣಾಮವಾಗಿ ಬುಧವಾರ ರಾತ್ರಿ ಲೋ ಬಿಪಿಯಿಂದ ಅಸ್ವಸ್ಥರಾದ ಅವರನ್ನು ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಸ್ವಾಮೀಜಿಗಳು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿ ಗ್ರಾಮದವರು. ಮಹದೇವಯ್ಯ–ಜಯಮ್ಮ ದಂಪತಿಯ ಎರಡನೇ ಪುತ್ರರಾಗಿದ್ದ ಇವರ ಮೂಲ ಹೆಸರು ಮೋಹನ್ ಪ್ರದಾನ. 18ನೇ ವಯಸ್ಸಿನಲ್ಲಿ ಗೃಹತ್ಯಾಗ ಮಾಡಿದ ಅವರು ಜೈನ, ಕ್ರೈಸ್ತ ಹಾಗೂ ಬ್ರಹ್ಮಕುಮಾರಿ ಪಂಥಗಳ ಅಧ್ಯಯನ ನಡೆಸಿ, ಶರಣ ಸಾಹಿತ್ಯ ಸೇರಿದಂತೆ ವಿವಿಧ ಧರ್ಮಗಳ ವಿಚಾರಧಾರೆಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರು.

ಚಿತ್ರದುರ್ಗದ ಮುರುಘಾಮಠದಲ್ಲಿ ಕೆಲಕಾಲ ಅಧ್ಯಯನ ಮಾಡಿದ ನಂತರ ನಾಲ್ಕು ವರ್ಷಗಳ ಕಾಲ ಸಿಂಧನೂರಿನಲ್ಲಿ ಸ್ವಾಮೀಜಿಯಾಗಿ ವಾಸ್ತವ್ಯ ನಡೆಸಿದರು. ಬಳಿಕ 2011ರಲ್ಲಿ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಬಳಿ ಕನಕ ಗುರುಪೀಠವನ್ನು ಸ್ಥಾಪಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande