
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa