
ಉಡುಪಿ, 15 ಜನವರಿ (ಹಿ.ಸ.) :
ಆ್ಯಂಕರ್ : ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿ ನಕಲಿ ಖಾತೆಗಳನ್ನು ಸೃಜಿಸುವ ಹಾಗೂ ಬೇರೆ ಬೇರೆ ಕಾರಣಗಳಿಂದ ಹಣ ವರ್ಗಾಯಿಸಲು ಪ್ರಯತ್ನಿಸುವ ಸಂದೇಶಗಳನ್ನು ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಈಗಾಗಲೇ ಸೆನ್ ಪೊಲೀಸ್ ಠಾಣೆ,8 ಉಡುಪಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಆದರೂ, ಇಂತಹ ಪ್ರಕರಣಗಳು ಪುನರಾವರ್ತನೆಯಾಗುತ್ತಿದ್ದರಿಂದ, ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಸಿ ಹಣ ವರ್ಗಾವಣೆಗೆ ಅಥವಾ ಬೇಡಿಕೆಗಳಿಗೆ ಸಂಬಂಧಿಸಿದ ಯಾವುದೇ ಸಂದೇಶಗಳನ್ನು ಸ್ವೀಕರಿಸಿದರೆ, ಅದಕ್ಕೆ ಸ್ಪಂದಿಸದೇ, ತಕ್ಷಣ ಸೆನ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಎಲ್ಲ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa