
ಧಾರವಾಡ, 16 ಜನವರಿ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಠ ಜಾತಿಯ ಉಪಯೋಜನೆ ಅಡಿಯಲ್ಲಿ ಎನ್.ಐ.ಎಸ್. ತರಬೇತಿ ಪಡೆಯುತ್ತಿರುವ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರು ಪಾವತಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 03, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa