
ಚಿತ್ರದುರ್ಗ, 16 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಚಿತ್ರದುರ್ಗ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ಸೇರಿದಂತೆ ಖಾಸಗಿ ಸಂಸ್ಥೆಗಳ ವಾಹನಗಳ ಮೇಲೆ ಉತ್ಪನ್ನ ಜಾಹೀರಾತು ಫಲಕ ಅಳವಡಿಕೆಗೆ ಅನುಮೋದನೆ ನೀಡಲಾಯಿತು.
ಮಧ್ಯಮ ವರ್ಗದ ವಾಹನಗಳಿಗೆ ರೂ.750 ಹಾಗೂ ಭಾರಿ ಸರಕು ಸಾಗಾಣಿಕೆ ವಾಹನಗಳಿಗೆ ರೂ.2000 ಶುಲ್ಕ ನಿಗದಿಪಡಿಸಲಾಯಿತು.
ಸಭೆಯಲ್ಲಿ ಒಟ್ಟು 56 ವಿಷಯಗಳನ್ನು ಚರ್ಚಿಸಿ, ರಹದಾರಿ ವರ್ಗಾವಣೆ, ಮಾರ್ಗ ವಿಸ್ತರಣೆ–ಕಡಿತ, ವೇಳಾಪಟ್ಟಿ ನಿಗಧಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa