
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಬೃಹನ್ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾರ್ಯಕರ್ತರು ಸಿಹಿ ವಿತರಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಕ್ತಾರರಾದ ಪ್ರಕಾಶ್ ಶೇಷರಾಘವಾಚಾರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa