ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಬೊಮ್ಮಾಯಿ ಅಭಿನಂದನೆ
ಬೆಂಗಳೂರು, 16 ಜನವರಿ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ಬಹಳ ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ. ಈ ಅಭೂತಪೂರ್ವ ಜಯಕ್ಕೆ ಕಾರಣೀಕರ್ತರ
Bommai


ಬೆಂಗಳೂರು, 16 ಜನವರಿ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ಬಹಳ ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ. ಈ ಅಭೂತಪೂರ್ವ ಜಯಕ್ಕೆ ಕಾರಣೀಕರ್ತರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಈ ಕುರಿತು ಎಕ್ಸನಲ್ಲಿ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿ ಯ ಐದು ಮಹಾನಗರ ಪಾಲಿಕೆ ಚುನಾವಣೆ ಯಲ್ಲಿ ಬಿಜೆಪಿ ಜೆಡಿಎಸ್ ಗೆಲುವು ಸಾಧಿಸುವುದು ನಿಶ್ಚಿತ ಈ ಚುನಾವಣೆಯ ಬಿಜೆಪಿ ಗೆಲುವಿನಲ್ಲಿ ಕಾಂಗ್ರೆಸ್ ನ ಅಂತ್ಯ ಆರಂಭ ಎಂದು ತಿಳಿಸಿದ್ದಾರೆ‌.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande