ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಐತಿಹಾಸಿಕ ಜಯ: ಪ್ರಹ್ಲಾದ ಜೋಶಿ
ನವದೆಹಲಿ, 16 ಜನವರಿ (ಹಿ.ಸ.) : ಆ್ಯಂಕರ್ : ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಫಲಿತಾಂಶವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬ
Victory


ನವದೆಹಲಿ, 16 ಜನವರಿ (ಹಿ.ಸ.) :

ಆ್ಯಂಕರ್ : ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಈ ಫಲಿತಾಂಶವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದ ಮೇಲಿನ ಜನರ ಅಚಲ ವಿಶ್ವಾಸ ಮತ್ತು ನಂಬಿಕೆಗೆ ದೊರೆತ ಸ್ಪಷ್ಟ ಜನಾದೇಶವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ ನಗರ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಜನಸೇವೆಗೆ ಆದ್ಯತೆ ನೀಡುವ ಹೊಸ ಅಧ್ಯಾಯಕ್ಕೆ ಜನರು ದಾರಿ ಮಾಡಿಕೊಟ್ಟಿದ್ದಾರೆ. ಈ ಮಹತ್ವದ ವಿಜಯಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷಗಳ ಎಲ್ಲಾ ಕಾರ್ಯಕರ್ತರು ಮತ್ತು ನಾಯಕತ್ವವನ್ನು ಪ್ರಹ್ಲಾದ ಜೋಶಿ ಅಭಿನಂದಿಸಿದ್ದಾರೆ.

ಜನರ ತೀರ್ಪು ಮತ್ತು ಸಂಕಲ್ಪಬದ್ಧ ಪ್ರಯತ್ನಗಳು ಈ ಗೆಲುವಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಮುಂಬೈ ನಗರ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande