
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ :ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ವಿಚಾರಕ್ಕೆ ನಾವು ಮುಕ್ತವಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, “ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ವಿಚಾರದಲ್ಲಿ ನಮ್ಮಿಂದ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಹೇಗಿರುತ್ತವೆ, ಸ್ಥಳೀಯವಾಗಿ ಬಿಜೆಪಿ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದರು.
“ಕಾಂಗ್ರೆಸ್‌ನ ದುರಾಡಳಿತ ರಾಜ್ಯದಿಂದ ಹೋಗಬೇಕು. ಅದಕ್ಕಾಗಿ ನಾವು ತಯಾರಿದ್ದೇವೆ. ಮೈತ್ರಿ ವಿಚಾರದಲ್ಲಿ ಮುಕ್ತ ಅವಕಾಶ ಇಟ್ಟುಕೊಂಡಿದ್ದೇವೆ. ರಾಜ್ಯಕ್ಕೆ ಉತ್ತಮ ಆಡಳಿತ ನೀಡುವ ಉದ್ದೇಶ ನಮ್ಮದು. ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಕಸ ವಿಲೇವಾರಿ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಪಕ್ಷಗಳ ನಡೆ ಮತ್ತು ಕೊಡುಗೆ ಏನು ಎಂಬುದನ್ನು ಜನರ ಮುಂದೆ ಇಟ್ಟುಕೊಂಡು ಹೋಗಬೇಕಾಗಿದೆ” ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa