
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಜಿಬಿಎ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ಮುಂದಿನ ಚುನಾವಣಾ ತಂತ್ರ, ಸಂಘಟನಾ ಬಲವರ್ಧನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸಮರ್ಥವಾಗಿ ತಲುಪಿಸುವ ಕುರಿತು ಸವಿಸ್ತಾರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಎಸ್. ನಾರಾಯಣ್, ಮುರಳೀಧರ ಹಾಲಪ್ಪ ಸೇರಿದಂತೆ ಪಕ್ಷದ ಹಲವಾರು ಹಿರಿಯ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಸಭೆಯಲ್ಲಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವುದು, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವುದು ಹಾಗೂ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವ ಕುರಿತು ಮಾರ್ಗಸೂಚಿಗಳನ್ನು ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa