ಮಂಡ್ಯ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಮಂಡ್ಯ, 16 ಜನವರಿ (ಹಿ.ಸ.) : ಆ್ಯಂಕರ್ : ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2025-26ರ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವ
Dist sports


ಮಂಡ್ಯ, 16 ಜನವರಿ (ಹಿ.ಸ.) :

ಆ್ಯಂಕರ್ : ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2025-26ರ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ದೈಹಿಕವಾಗಿ ದೃಢತೆಯನ್ನು ಕಾಪಾಡಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಮಾದರಿಯಾಗುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಪಿ ರವಿಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್ ಕೆ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಶ್ರೀಮತಿ ಶೋಭಾರಾಣಿ ಸಹಿತ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande