ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಓಂ ಬಿರ್ಲಾ ಕೃತಜ್ಞತೆ
ನವದೆಹಲಿ, 16 ಜನವರಿ (ಹಿ.ಸ.) : ಆ್ಯಂಕರ್ : ಕಾಮನ್‌ವೆಲ್ತ್ ರಾಷ್ಟ್ರಗಳ ಸ್ಪೀಕರ್‌ಗಳ 28ನೇ ಸಮ್ಮೇಳನವನ್ನು ಯಶಸ್ವಿಯಾಗಿ ಉದ್ಘಾಟಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಶುಕ್ರವಾರ ಸಾಮಾಜ
Ombirla


ನವದೆಹಲಿ, 16 ಜನವರಿ (ಹಿ.ಸ.) :

ಆ್ಯಂಕರ್ : ಕಾಮನ್‌ವೆಲ್ತ್ ರಾಷ್ಟ್ರಗಳ ಸ್ಪೀಕರ್‌ಗಳ 28ನೇ ಸಮ್ಮೇಳನವನ್ನು ಯಶಸ್ವಿಯಾಗಿ ಉದ್ಘಾಟಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪೋಸ್ಟ್ ಮಾಡಿರುವ ಓಂ ಬಿರ್ಲಾ,

ನಿಮ್ಮ ಕೈಯಿಂದ 28ನೇ ಸಿಎಸ್ ಪಿಒಸಿ ಉದ್ಘಾಟನೆಯು ಭಾರತಕ್ಕೆ ಮಾತ್ರವಲ್ಲ, ಇಡೀ ಜಾಗತಿಕ ಪ್ರಜಾಪ್ರಭುತ್ವ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿಯ ಸಮರ್ಥ ಮಾರ್ಗದರ್ಶನದಿಂದಾಗಿ, ಸಿಎಸ್ ಪಿಒಸಿ ಇತಿಹಾಸದಲ್ಲೇ ಅತಿ ಹೆಚ್ಚು ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನವನ್ನು ಭಾರತ ಆತಿಥ್ಯ ವಹಿಸಿದೆ ಎಂದು ಅವರು ಹೇಳಿದರು. ಜೊತೆಗೆ, ಪ್ರಜಾಪ್ರಭುತ್ವ ಸಂಪ್ರದಾಯಗಳ ಕುರಿತು ಪ್ರಧಾನಿ ಮೋದಿ ಅವರ ದೃಷ್ಟಿಕೋನವು ಜಾಗತಿಕ ವೇದಿಕೆಯಲ್ಲಿ ಸಂಸದೀಯ ಕಾರ್ಯಚಟುವಟಿಕೆಗಳಿಗೆ ಹೊಸ ದಿಕ್ಕು ಮತ್ತು ಸ್ಫೂರ್ತಿ ನೀಡಲಿದೆ ಎಂದು ಬಿರ್ಲಾ ಅಭಿಪ್ರಾಯಪಟ್ಟರು.

ಗುರುವಾರ ನವದೆಹಲಿಯ ಸಂಸತ್ ಭವನ ಸಂಕೀರ್ಣದಲ್ಲಿರುವ ಸಂವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 28ನೇ ಸಿಎಸ್ ಪಿಒಸಿ ಸಮ್ಮೇಳನವನ್ನು ಅಧಿಕೃತವಾಗಿ ಉದ್ಘಾಟಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande