ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಬೇಡ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, 16 ಜನವರಿ (ಹಿ.ಸ.) : ಆ್ಯಂಕರ್ :ಜೆಡಿಎಸ್ ಉಳಿಯುತ್ತದೆಯೋ, ನಾಶವಾಗುತ್ತದೆಯೋ ಎಂಬುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಅದನ್ನು ಈ ನಾಡಿನ ಜನ ತೀರ್ಮಾನಿಸುತ್ತಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
Hdk


ಬೆಂಗಳೂರು, 16 ಜನವರಿ (ಹಿ.ಸ.) :

ಆ್ಯಂಕರ್ :ಜೆಡಿಎಸ್ ಉಳಿಯುತ್ತದೆಯೋ, ನಾಶವಾಗುತ್ತದೆಯೋ ಎಂಬುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಅದನ್ನು ಈ ನಾಡಿನ ಜನ ತೀರ್ಮಾನಿಸುತ್ತಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ, ಜೆಡಿಎಸ್ ಪಕ್ಷ ನಿರ್ಣಾಮವಾಗುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಬೇಡ. ಲೀಸ್ ಬೇಸ್ ಸಿಎಂ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ತಮ್ಮ ತಂದೆಯನ್ನು ಕೇಳಲಿ. ಕಾಂಗ್ರೆಸ್‌ನಲ್ಲಿ ಎಷ್ಟು ಜನರನ್ನು ಜೆಡಿಎಸ್‌ನಿಂದ ಲೀಸ್ ಮೇಲೆ ಪಡೆದಿದ್ದೀರಿ? ಸಿಎಂನಿಂದ ಹಿಡಿದು ಎಷ್ಟು ಮಂತ್ರಿಗಳನ್ನು ಲೀಸ್ ಆಧಾರದಲ್ಲಿ ನಿಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿದ್ದೀರಿ?” ಎಂದು ಕಿಡಿಕಾರಿದರು.

ಕಾಂಗ್ರೆಸ್ ಒಳಗಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ವ್ಯಂಗ್ಯವಾಡಿದ ಅವರು, “ನಿಮ್ಮ ಪಕ್ಷದಲ್ಲೇ ಒಬ್ಬರ ಲೀಸ್ ಅವಧಿ ಮುಗಿದಿದೆ, ನನ್ನನ್ನ ಸಿಎಂ ಮಾಡಿ ಅಂತಾರೆ. ಇನ್ನೊಬ್ಬರು ಲೀಸ್ ಅವಧಿ ಮುಗಿದಿಲ್ಲ, ನಾನೇ ಮುಂದುವರಿಯುತ್ತೇನೆ ಅಂತಾರೆ. ಮೊದಲು ನಿಮ್ಮ ಪಕ್ಷದ ಹಣೆಬರಹ ನೋಡಿಕೊಳ್ಳಿ” ಎಂದು ಟೀಕಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande