
ಚಿತ್ರದುರ್ಗ, 16 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗ ಮತ್ತು ಸವಿತಾ ಸಮಾಜದ ಸಹಕಾರದೊಂದಿಗೆ ಬರುವ ಜ.25 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಎಂದು ಉಪವಿಭಾಗಧಿಕಾರಿ ವೆಂಕಟೇಶ ನಾಯ್ಕ್ ತಿಳಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸವಿತಾ ಮಹರ್ಷಿ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.25 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಯ 11 ಗಂಟೆಗೆ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಚಾಲನೆ ನೀಡಲಾಗುವುದು.
ಕಲಾವಿದ ಸುರೇಂದ್ರ ಮತ್ತು ತಂಡದವು ಗೀತಗಾಯನ ಕಾರ್ಯಕ್ರಮ ನಡೆಸಿಕೊಡುವರು.
ಸಂಪೂನ್ಮೂಲ ವ್ಯಕ್ತಿಗಳು ಸವಿತಾ ಮಹರ್ಷಿ ಕುರಿತು ಉಪನ್ಯಾಸ ನೀಡುವರು. ಶಿಷ್ಟಾಚಾರದ ಅನುಸಾರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ಉಪವಿಭಾಗಧಿಕಾರಿ ವೆಂಕಟೇಶ ನಾಯ್ಕ್ ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆರ್.ಶ್ರೀನಿವಾಸ್, ಗೌರವ ಅಧ್ಯಕ್ಷ ಲಿಂಗರಾಜು, ಮುಖಂಡರು ತಿಪ್ಪೇಸ್ವಾಮಿ, ಪ್ರಸನ್ನ, ವೆಂಕಟೇಶ್ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa