
ನವದೆಹಲಿ, 16 ಜನವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ನವೋದ್ಯಮ (ಸ್ಟಾರ್ಟ್‌ಅಪ್) ದಿನದ ಅಂಗವಾಗಿ ದೇಶದ ಎಲ್ಲಾ ನವೋದ್ಯಮಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ದೃಷ್ಟಿಕೋನದ ಫಲವಾಗಿ ಭಾರತ ಇಂದು ಸ್ಟಾರ್ಟ್‌ಅಪ್‌ಗಳ ಸುವರ್ಣಯುಗವನ್ನು ಅನುಭವಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿರುವ ನವೋದ್ಯಮಗಳು ಕೇವಲ ಆರ್ಥಿಕ ಬೆಳವಣಿಗೆಯಲ್ಲಷ್ಟೇ ಅಲ್ಲ, ದೇಶದ ಜನತೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜೋಶಿ ಅಭಿಪ್ರಾಯಪಟ್ಟಿದ್ದಾರೆ.
ನವೋದ್ಯಮಗಳು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರೊಂದಿಗೆ ದೇಶದ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದು, ಸ್ವಾವಲಂಬಿ ಹಾಗೂ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದಿರುವ ಅವರು, ಮುಂದಿನ ದಿನಗಳಲ್ಲಿ ನವೋದ್ಯಮಗಳ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa