ಪೌರಾಯುಕ್ತರಿಗೆ ಬೆದರಿಕೆ : ತಕ್ಷಣ ಕ್ರಮಕ್ಕೆ ಆರ್. ಅಶೋಕ ಆಗ್ರಹ
ಬೆಂಗಳೂರು, 16 ಜನವರಿ (ಹಿ.ಸ.) : ಆ್ಯಂಕರ್ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಮಹಿಳಾ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆ
Ashok


ಬೆಂಗಳೂರು, 16 ಜನವರಿ (ಹಿ.ಸ.) :

ಆ್ಯಂಕರ್ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಮಹಿಳಾ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.

ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಾವುದೇ ರಾಜಕೀಯ ಹಸ್ತಕ್ಷೇಪ ಅಥವಾ ಒತ್ತಡವಿಲ್ಲದೆ ನಿರ್ಭೀತಿಯಿಂದ ಕೆಲಸ ಮಾಡುವಂತ ಭಯಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಧಾನಸ ಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಅವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande