
ಹುಬ್ಬಳ್ಳಿ, 16 ಜನವರಿ (ಹಿ.ಸ.) :
ಆ್ಯಂಕರ್ : ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಹುಬ್ಬಳ್ಳಿ ಕಸಬಾಪೇಟ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡ ಬಂಧಿಸಿದೆ. ಬಂಧಿತರನ್ನು ಪರೀಜ್ ಖಾನ್ ಹಾಗೂ ಸಲ್ಮಾನ ಖಾನ್ ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿತರಿಂದ 15.4 ಕೆಜಿ ಗಾಂಜಾ, 3 ಮೊಬೈಲ್ ಫೋನ್‌ಗಳು ಹಾಗೂ ಅಪರಾಧಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತರನ್ನು ಮುಂದಿನ ಕ್ರಮಕ್ಕಾಗಿ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa