ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ನಾಯಕರು, ಗಣ್ಯರ ಸಂತಾಪ
ಬೀದರ್, 17 ಜನವರಿ (ಹಿ.ಸ.) : ಆ್ಯಂಕರ್ : ಅರಣ್ಯ ಸಚಿವ ಈಶ್ವರ ಖಂಡ್ರೆ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಕಳೆದ ರಾತ್ರಿ ಬೀದರ್ ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 102 ವರ್ಷಗಳ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಕಳೆದ 15 ದಿನಗಳಿಂದ ಬೀದರ್‌
Bhimanna Khandre


ಬೀದರ್, 17 ಜನವರಿ (ಹಿ.ಸ.) :

ಆ್ಯಂಕರ್ : ಅರಣ್ಯ ಸಚಿವ ಈಶ್ವರ ಖಂಡ್ರೆ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಕಳೆದ ರಾತ್ರಿ ಬೀದರ್ ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 102 ವರ್ಷಗಳ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

ಕಳೆದ 15 ದಿನಗಳಿಂದ ಬೀದರ್‌ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಭಾನುವಾರ (ಜ.11) ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಲ್ಲಿ ಏರುಪೇರಿನಿಂದ ಮತ್ತಷ್ಟು ಗಂಭೀರಗೊಂಡಿತ್ತು.

ಭೀಮಣ್ಣ ಖಂಡ್ರೆ ಅವರು 1923ರ ಜನವರಿ 8ರಂದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ (ಬಿ) ಗ್ರಾಮದಲ್ಲಿ ಜನಿಸಿದ್ದರು. ತಂದೆ ಶಿವಲಿಂಗಪ್ಪ ಹಾಗೂ ತಾಯಿ ಪಾರ್ವತಿಬಾಯಿ. ಲಕ್ಷ್ಮಿಬಾಯಿ ಅವರೊಂದಿಗೆ ವಿವಾಹವಾಗಿದ್ದ ಅವರು ಮೂವರು ಪುತ್ರರು ಮತ್ತು ಐವರು ಪುತ್ರಿಯರನ್ನು ಅಗಲಿದ್ದಾರೆ.

ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಸುದೀರ್ಘ ಅನುಭವ ಹೊಂದಿದ್ದ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande