ಎಎಪಿ ನಾಯಕರು ದೇಶದ ಕ್ಷಮೆಯಾಚಿಸಬೇಕು : ಮುಖ್ಯಮಂತ್ರಿ ರೇಖಾ ಗುಪ್ತಾ
ಪ್ರತಿ
Delhi cm


ನವದೆಹಲಿ, 17 ಜನವರಿ (ಹಿ.ಸ.) :

ಆ್ಯಂಕರ್ : ದೆಹಲಿ ವಿಧಾನ ಸಭೆ ಪ್ರತಿಪಕ್ಷ ನಾಯಕಿ ಅತಿಶಿ ವಿಡಿಯೋ ಪ್ರಕರಣದಲ್ಲಿ ಸತ್ಯ ಕೊನೆಗೂ ಜಯಗಳಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ವರದಿಯು ವಿಧಾನಸಭೆಯ ಕಾರ್ಯಕಲಾಪಗಳ ವೀಡಿಯೊವನ್ನು ಯಾವುದೇ ರೀತಿಯಲ್ಲಿ ತಿರುಚಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ಚಳಿಗಾಲದ ಅಧಿವೇಶನದ ವೇಳೆ ಜನವರಿ 6ರಂದು ವಿಧಾನಸಭೆಯಲ್ಲಿ ಪ್ರತಿ ಪಕ್ಷದ ನಾಯಕಿ ಅತಿಶಿ ಅವರು ಗುರುಗಳ ತ್ಯಾಗದ ಕುರಿತು ಮಾಡಿದ ಅಸಭ್ಯ ಮತ್ತು ನಾಚಿಕೆಗೇಡಿನ ಹೇಳಿಕೆಗಳ ವೀಡಿಯೊ ಶೇ.100 ನಿಖರವಾಗಿದೆ ಎಂದು ಹೇಳಿದ್ದಾರೆ.

ಆ ವೀಡಿಯೊವನ್ನು ತಿರುಚಲಾಗಿದೆ ಎಂಬ ಎಎಪಿ ನಾಯಕರ ಆರೋಪ ಸಂಪೂರ್ಣ ಸುಳ್ಳೆಂದು ಇದೀಗ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ತಪ್ಪನ್ನು ಒಪ್ಪಿಕೊಳ್ಳುವ ಬದಲು, ಎಎಪಿ ಪಂಜಾಬ್ ಸರ್ಕಾರ, ಪಂಜಾಬ್ ಪೊಲೀಸರು ಹಾಗೂ ಪಂಜಾಬ್ ವಿಧಿವಿಜ್ಞಾನ ಪ್ರಯೋಗಾಲಯವನ್ನು ಬಳಸಿಕೊಂಡು ಸತ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ರೇಖಾ ಗುಪ್ತಾ ಆರೋಪಿಸಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಆಶ್ರಯದಲ್ಲಿ ಪಂಜಾಬ್‌ನ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಈ ವಿಷಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ವಿಧಿವಿಜ್ಞಾನ ತಂತ್ರಜ್ಞಾನ ಮತ್ತು ದೃಢವಾದ ಪುರಾವೆಗಳು ಇಂದು ಎಎಪಿಯ ಪಿತೂರಿಯನ್ನು ಬಹಿರಂಗಪಡಿಸಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಗುರುಗಳನ್ನು ಅವಮಾನಿಸಿರುವುದಕ್ಕಾಗಿ ಆಮ್ ಆದ್ಮಿ ಪಕ್ಷದ ನಾಯಕರು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande