
ನವದೆಹಲಿ, 17 ಜನವರಿ (ಹಿ.ಸ.) :
ಆ್ಯಂಕರ್ : ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ರೈಲು ನಿಲ್ದಾಣದಿಂದ ಹೌರಾ ಮತ್ತು ಕಾಮಾಖ್ಯ (ಗುವಾಹಟಿ) ನಡುವೆ ಸಂಚರಿಸಲಿರುವ ಈ ರೈಲು, ಆಧುನಿಕ ಒಳಾಂಗಣ ವಿನ್ಯಾಸ ಹಾಗೂ ಸುಧಾರಿತ ಸೌಲಭ್ಯಗಳನ್ನು ಒಳಗೊಂಡಿದ್ದು, ದೀರ್ಘದೂರ ಪ್ರಯಾಣವನ್ನು ಇನ್ನಷ್ಟು ಆರಾಮದಾಯಕವಾಗಿಸಲಿದೆ.
ಪ್ರಧಾನಮಂತ್ರಿ ಕಚೇರಿ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ಶನಿವಾರ ಮಧ್ಯಾಹ್ನ ಮಾಲ್ಡಾದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ₹3,250 ಕೋಟಿಗೂ ಅಧಿಕ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ, ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ನಾಲ್ಕು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa