ಎಂ.ಜಿ. ರಾಮಚಂದ್ರನ್ ಜನ್ಮ ವಾರ್ಷಿಕೋತ್ಸವ ; ಪ್ರಧಾನಿ ಮೋದಿ ಗೌರವ
ನವದೆಹಲಿ, 17 ಜನವರಿ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಭಾರತ ರತ್ನ ಡಾ. ಎಂ.ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪ್ರತ್ಯೇಕ ಸಂದೇಶ ಹಂಚಿಕೊಂಡ ಪ್ರಧಾನಿ ಮೋ
Pm


ನವದೆಹಲಿ, 17 ಜನವರಿ (ಹಿ.ಸ.) :

ಆ್ಯಂಕರ್ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಭಾರತ ರತ್ನ ಡಾ. ಎಂ.ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು.

ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪ್ರತ್ಯೇಕ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಡಾ. ಎಂ.ಜಿ. ರಾಮಚಂದ್ರನ್ ಅವರ ಬಹುಮುಖ ವ್ಯಕ್ತಿತ್ವ ಮತ್ತು ಅಪಾರ ಕೊಡುಗೆಗಳನ್ನು ಸ್ಮರಿಸಿದರು.

ತಮಿಳುನಾಡಿನ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಅವರ ಪಾತ್ರ ಅತ್ಯಂತ ನಿರ್ಣಾಯಕವಾಗಿತ್ತು ಎಂದು ಹೇಳಿದರು.

ತಮಿಳು ಸಂಸ್ಕೃತಿಗೆ ಜಾಗತಿಕ ಮನ್ನಣೆ ತಂದುಕೊಡುವಲ್ಲಿ ಡಾ. ಎಂ.ಜಿ. ರಾಮಚಂದ್ರನ್ ಮಹತ್ವದ ಪಾತ್ರ ವಹಿಸಿದ್ದರು. ತಮಿಳುನಾಡಿನ ಪ್ರಗತಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯವಾಗಿದ್ದು, ಸಮಾಜಮುಖಿ ದೃಷ್ಟಿಕೋನದಿಂದ ಅವರು ಕೈಗೊಂಡ ಕಾರ್ಯಕ್ರಮಗಳು ಜನರ ಜೀವನದಲ್ಲಿ ಶಾಶ್ವತ ಪರಿಣಾಮ ಬೀರಿವೆ ಎಂದು ಪ್ರಧಾನಿ ಹೇಳಿದರು.

ಡಾ. ಎಂ.ಜಿ. ರಾಮಚಂದ್ರನ್ ಅವರು ಕಂಡ ಕನಸುಗಳು ಮತ್ತು ಸಮಾಜದ ಹಿತಕ್ಕಾಗಿ ಹೊಂದಿದ್ದ ದೃಷ್ಟಿಯನ್ನು ಸಾಕಾರಗೊಳಿಸಲು ತಮ್ಮ ಸರ್ಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande