88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು : ಮುಖ್ಯಮಂತ್ರಿ
ಬೆಂಗಳೂರು, 17 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ಅತ್ಯಂತ ಗಂಭೀರ ಹಾಗೂ ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು
Cm


ಬೆಂಗಳೂರು, 17 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ಅತ್ಯಂತ ಗಂಭೀರ ಹಾಗೂ ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯುವಂತಾಗಿದೆ ಇದು ಸರ್ಕಾರಕ್ಕೂ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುತ್ತದೆ ಎಂದು ಕಿಡಿಕಾರಿದರು.

2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.

ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ಇಳಿಮುಖವಾಗಿದ್ದರೂ ಸೈಬರ್ ಅಪರಾಧ ಹಾಗೂ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವಾಗಿಸಲು ಸರ್ಕಾರ ಬದ್ಧವಾಗಿದೆ. ಪೊಲೀಸರು ಜಾಗರೂಕತೆ ಮತ್ತು ದಕ್ಷತೆಯಿಂದ ಕೆಲಸ ಮಾಡಿದರೆ ಈ ಗುರಿ ಸಾಧಿಸಬಹುದು ಎಂದರು.

ಡ್ರಗ್ಸ್ ದಂಧೆ ನಡೆಸುವವರನ್ನು ಕಟ್ಟುನಿಟ್ಟಾಗಿ ವಿಚಾರಣೆ ಮಾಡಬೇಕು. ವಿದೇಶಿ ಡ್ರಗ್ಸ್ ಆರೋಪಿತರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು. ಡ್ರಗ್ಸ್ ಪತ್ತೆಯಲ್ಲಿ ವಿಫಲರಾದ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ವಹಿಸಬೇಕು. ಬಲಾಢ್ಯರ ಪರವಾಗಿ ಕೆಲಸ ಮಾಡುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನು ಇನ್ನಷ್ಟು ಬಿಗಿಗೊಳಿಸುವ ಅಗತ್ಯವಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande