
ಹುಬ್ಬಳ್ಳಿ, 18 ಜನವರಿ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಹು.ಧಾ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಯುವ ಮೋರ್ಚಾ ಘಟಕದ ವತಿಯಿಂದ, ಶಾಸಕ ಮಹೇಶ್ ತೆಂಗಿನಕಾಯಿ ಅವರ ನೇತೃತ್ವದಲ್ಲಿ ಇಂದು ವಾರ್ಡ್ ನಂ.48ರ ವ್ಯಾಪ್ತಿಯ ಶಿರೂರ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, ಪ್ರತೀ ತಿಂಗಳು ಎರಡು ರವಿವಾರಗಳು ಕೆಲ ಗಂಟೆಗಳ ಕಾಲ ಸ್ವಚ್ಛತಾ ಕಾರ್ಯ ನಡೆಸುವ ಅಭಿಯಾನವನ್ನು ಯುವ ಮೋರ್ಚಾ ಘಟಕ ಆರಂಭಿಸಿದೆ. ಅದರ ಭಾಗವಾಗಿ ಇಂದು ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ್ ತೆಂಗಿನಕಾಯಿ ಅವರು, ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಯುವಕರು ಈ ರೀತಿಯ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಮುಖಂಡರು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa