ಮನೆ ಕಳ್ಳತನ ಪ್ರಕರಣ ಭೇದಿಸಿದ ಗದಗ ಗ್ರಾಮೀಣ ಪೋಲಿಸರು
ಗದಗ, 18 ಜನವರಿ (ಹಿ.ಸ.) : ಆ್ಯಂಕರ್ : ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಡಿ.ಎಸ್.ಪಿ ಸೈಬರ್ ಪೊಲೀಸ್ ಠಾಣೆ ಹಾಗೂ ಡಿ.ಎಸ್.ಪಿ ಗದಗ ಉಪವಿಭಾಗರವರ ನೇತೃತ್ವದ ವಿಶೇಷ ತಂಡವು ಒಬ್ಬ ಆರೋಪಿತನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿ
ಫೋಟೋ


ಗದಗ, 18 ಜನವರಿ (ಹಿ.ಸ.) :

ಆ್ಯಂಕರ್ : ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಡಿ.ಎಸ್.ಪಿ ಸೈಬರ್ ಪೊಲೀಸ್ ಠಾಣೆ ಹಾಗೂ ಡಿ.ಎಸ್.ಪಿ ಗದಗ ಉಪವಿಭಾಗರವರ ನೇತೃತ್ವದ ವಿಶೇಷ ತಂಡವು ಒಬ್ಬ ಆರೋಪಿತನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿತನಿಂದ ಸುಮಾರು 38 ಗ್ರಾಂ ತೂಕದ ಬಂಗಾರದ ಆಭರಣಗಳನ್ನು (ಅಂದಾಜು ಮೌಲ್ಯ ₹3,35,000) ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್, ಅವರು ಶ್ಲಾಘಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande