ಮನರೇಗಾ ಪುನ: ಸ್ಥಾಪನೆ ಹೋರಾಟಕ್ಕೆ ಸಜ್ಜಾಗಿ : ಸಿದ್ದರಾಮಯ್ಯ ಕರೆ
ಮೈಸೂರು, 18 ಜನವರಿ (ಹಿ.ಸ.) : ಆ್ಯಂಕರ್ : ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ. ನರಸೀಪುರ ತಾಲೂಕಿನ ಕು
Cm


ಮೈಸೂರು, 18 ಜನವರಿ (ಹಿ.ಸ.) :

ಆ್ಯಂಕರ್ : ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು.ಅದನ್ನು ಕಿತ್ತುಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿ ದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಇತೀಚೆಗೆ ಮನರೇಗಾ ಬದಲಿಗೆ ವಿಬಿಜಿ ಗ್ರಾಮ್ ಜಿ ಎಂಬ ಕಾಯ್ದೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಮೂರು ದಿನ ಕೆಲಸ ಕೊಡುವ ಕಾಯ್ದೆ.ಅದು ಸಂವಿಧಾನದ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು

ಹಾಕಲಾಗುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande