ಡ್ರಗ್ಸ್ ಮಾಫಿಯಾ ನಿಯಂತ್ರಣದಲ್ಲಿ ಸರ್ಕಾರ ವಿಫಲ : ಅಶೋಕ್
ಬೆಂಗಳೂರು, 18 ಜನವರಿ (ಹಿ.ಸ.) : ಆ್ಯಂಕರ್ : ಡ್ರಗ್ಸ್ ಮಾಫಿಯಾ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆರೋಪ ಮಾಡಿದರು. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್
Ashok


ಬೆಂಗಳೂರು, 18 ಜನವರಿ (ಹಿ.ಸ.) :

ಆ್ಯಂಕರ್ : ಡ್ರಗ್ಸ್ ಮಾಫಿಯಾ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆರೋಪ ಮಾಡಿದರು.

ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಗೂಂಡಾಗಿರಿ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಭ್ರಷ್ಟಾಚಾರ ಬ್ರಹ್ಮಾಂಡವಾಗಿ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಡ್ರಗ್ಸ್ ಜಾಲ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದರೂ, ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಯುವಜನತೆ ನಾಶದ ಹಾದಿಗೆ ತಳ್ಳಲ್ಪಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande