
ಚಿತ್ರದುರ್ಗ, 18 ಜನವರಿ (ಹಿ.ಸ.) :
ಆ್ಯಂಕರ್ : 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಗಳ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಪಠ್ಯ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಮಕ್ಕಳ ಸಾಹಿತ್ಯ, ಸ್ಪರ್ಧಾತ್ಮಕ, ಪಠ್ಯಪುಸ್ತಕ, ಸಾಂದರ್ಭಿಕ ಮತ್ತು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಗಳ ಪುಸ್ತಕಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪುಸ್ತಕಗಳ ನೋಂದಣಿ ಕಾಯ್ದೆ ಅನ್ವಯ ಪ್ರಕಾಶಕರು 2025ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದ ಆವೃತ್ತಿಯ ಪುಸ್ತಕಗಳ 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಆಯ್ಕೆಗಾಗಿ ಸಲ್ಲಿಸಲಾದ 3 ಪ್ರತಿಗಳಲ್ಲಿ ಒಂದನ್ನು ಪರಿಗಣಿಸಲಾಗುತ್ತದೆ.
2025ರಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿ ಶೀರ್ಷಿಕೆ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ 2026ರ ಜನವರಿ 31ರ ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸಬೇಕು. ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.
ಹೊರ ರಾಜ್ಯಗಳಲ್ಲಿ 2025ರಲ್ಲಿ ಪ್ರಥಮ ಮುದ್ರಣಗೊಂಡ ಪ್ರಕಟವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನು ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ, ಆಯಾ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ, ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಮತ್ತು ಈ ಪುಸ್ತಕದ ಒಂದು ಪ್ರತಿಯನ್ನು ಜ.31ರ ಸಂಜೆ 5.30ರೊಳಗಾಗಿ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಬಹುದು.
2025ನೇ ಸಾಲಿನಲ್ಲಿ ಪ್ರಕಟಗೊಂಡ ಪುಸ್ತಕಗಳ ಆಯ್ಕೆಗೆ ಪ್ರತ್ಯೇಕವಾಗಿ ಆಯುಕ್ತರ ಕಚೇರಿಯಲ್ಲಿ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲು ಇಚ್ಛಿಸುವ ಲೇಖಕರು, ಲೇಖಕ- ಪ್ರಕಾಶಕರು, ಪ್ರಕಟಣಾ ಸಂಸ್ಥೆಯವರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಅರ್ಜಿಗಳು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯುಕ್ತರ ಕಚೇರಿಯ ದೂರವಾಣಿ ಸಂಖ್ಯೆ 080-22864990, 22867358 ಮತ್ತು ರಾಜ್ಯ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ 080-22212128 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa