ಬಸವ ತತ್ವ ಸಮ್ಮೇಳನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ
ದಾವಣಗೆರೆ, 18 ಜನವರಿ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿರಕ್ತಮಠ ಪಾಂಡೋಮಟ್ಟಿಯಲ್ಲಿ ಆಯೋಜಿಸಲಾದ ಪರಮಪೂಜ್ಯ ಲಿಂ. ಶ್ರೀ ಶ್ರೀ ಸಂಗಮನಾಥ ಮಹಾಸ್ವಾಮಿಗಳ 64ನೇ ಸ್ಮರಣೋತ್ಸವ, ಪರಮಪೂಜ್ಯ ಲಿಂ. ಶ್ರೀ ಶ್ರೀ ಚನ್ನಬಸವ ಮಹಾಸ್ವಾಮಿಗಳ 19ನೇ ಸ್ಮರಣೋತ್ಸವ ಹಾಗೂ ಬಸವತತ್ವ ಸಮ್
Inauguration


ದಾವಣಗೆರೆ, 18 ಜನವರಿ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿರಕ್ತಮಠ ಪಾಂಡೋಮಟ್ಟಿಯಲ್ಲಿ ಆಯೋಜಿಸಲಾದ ಪರಮಪೂಜ್ಯ ಲಿಂ. ಶ್ರೀ ಶ್ರೀ ಸಂಗಮನಾಥ ಮಹಾಸ್ವಾಮಿಗಳ 64ನೇ ಸ್ಮರಣೋತ್ಸವ, ಪರಮಪೂಜ್ಯ ಲಿಂ. ಶ್ರೀ ಶ್ರೀ ಚನ್ನಬಸವ ಮಹಾಸ್ವಾಮಿಗಳ 19ನೇ ಸ್ಮರಣೋತ್ಸವ ಹಾಗೂ ಬಸವತತ್ವ ಸಮ್ಮೇಳನವನ್ನು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬಸವತತ್ವದ ಮೌಲ್ಯಗಳು ಇಂದಿನ ಸಮಾಜಕ್ಕೆ ದಿಕ್ಕು ತೋರಿಸುವ ದೀಪದಂತೆ ಪ್ರಸ್ತುತವಾಗಿದ್ದು, ಸಮಾನತೆ, ಶ್ರಮದ ಗೌರವ ಮತ್ತು ಮಾನವೀಯತೆಯ ಮಹತ್ವದ ಸಂದೇಶವನ್ನು ಸಾರುತ್ತವೆ ಎಂದು ಹೇಳಿದರು.

ಬಸವಣ್ಣನವರ ತತ್ವಗಳು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸುವಲ್ಲಿ ಸದಾ ಮಾರ್ಗದರ್ಶಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಸೇರಿದಂತೆ ಅನೇಕ ಗಣ್ಯರು, ಮಠಾಧೀಶರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande