
ಹುಬ್ಬಳ್ಳಿ, 18 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಜಾರಿಗೊಂಡಿರುವ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಅನುಷ್ಠಾನ ಸಮಾರಂಭವನ್ನು ಹು.ಧಾ. ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರು ತಮ್ಮ ಗೃಹ ಕಚೇರಿಯಲ್ಲಿ ಪುಟ್ಟ ಗ್ರಂಥಾಲಯವನ್ನು ಸ್ಥಾಪಿಸುವ ಮೂಲಕ ಉದ್ಘಾಟಿಸಿದರು.
ಇಂದಿನ ಯುವ ಪೀಳಿಗೆಯಲ್ಲಿ ಪುಸ್ತಕ ಓದುವ ಆಸಕ್ತಿ ಹಾಗೂ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ರಾಜ್ಯಾದ್ಯಂತ 1 ಲಕ್ಷ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿ, ಓದು ಸಂಸ್ಕೃತಿ ಬೆಳೆಸುವುದು ಬೌದ್ಧಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಅಗತ್ಯವಾಗಿದ್ದು, ‘ಮನೆಗೊಂದು ಗ್ರಂಥಾಲಯ’ ಯೋಜನೆ ಈ ದಿಕ್ಕಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಕರ್ನಾಟಕ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಜಿಲ್ಲಾ ಜಾಗೃತಿ ಸಮಿತಿಯ ಸಂಚಾಲಕರಾದ ಡಾ. ಮಹಾನಂತಪ್ಪ ನಂದೂರ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa