ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ; ಶಿವಮೊಗ್ಗ ಪೋಲಿಸರಿಂದ ಜಾಗೃತಿ ಕಾರ್ಯಕ್ರಮ
ಶಿವಮೊಗ್ಗ, 18 ಜನವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್, ಆನಂದಪುರ ಪೊಲೀಸ್ ಠಾಣೆಯ ವತಿಯಿಂದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದಪುರ ಬಸ್ ನಿಲ್ದಾಣದಲ್ಲಿ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕ ಜಾಗೃತಿ ಕ
Awareness


ಶಿವಮೊಗ್ಗ, 18 ಜನವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್, ಆನಂದಪುರ ಪೊಲೀಸ್ ಠಾಣೆಯ ವತಿಯಿಂದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದಪುರ ಬಸ್ ನಿಲ್ದಾಣದಲ್ಲಿ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗಿದ್ದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಅಗತ್ಯವಾದ ಸಲಹೆ–ಸೂಚನೆಗಳನ್ನು ನೀಡಲಾಯಿತು. ಹೆಲ್ಮೆಟ್ ಬಳಕೆ, ಸೀಟ್ ಬೆಲ್ಟ್ ಧಾರಣೆ, ವೇಗ ನಿಯಂತ್ರಣ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯೆಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande