
ಕುಮಟಾ, 18 ಜನವರಿ (ಹಿ.ಸ.) :
ಆ್ಯಂಕರ್ : ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿರುವುದರಿಂದ, ಕುಮಟಾ–ಶಿರಸಿ ಹಾಗೂ ಶಿರಸಿ–ಹಾವೇರಿ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎನ್.ಎಚ್.ಎ.ಐ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಮಟಾದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸಂಸದರು, ಜಾತ್ರಾ ಅವಧಿಯಲ್ಲಿ ರಸ್ತೆ ಕಾಮಗಾರಿಗಳಿಂದ ಸಂಚಾರಕ್ಕೆ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆಗಳನ್ನು ತಕ್ಷಣ ಜಾರಿಗೆ ತರಬೇಕು. ಸಂಚಾರ ಸುಗಮತೆಗೆ ತಾತ್ಕಾಲಿಕ ಮಾರ್ಗ ವ್ಯವಸ್ಥೆ, ಎಚ್ಚರಿಕಾ ಫಲಕಗಳು ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ–66ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸೇತುವೆ, ಮೇಲ್ಸೇತುವೆ ಹಾಗೂ ರಸ್ತೆ ಕಾಮಗಾರಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ವೇಗವಾಗಿ ಪೂರ್ಣಗೊಳಿಸಬೇಕೆಂದು ಅವರು ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa