
ಬೆಂಗಳೂರು, 18 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ವಾರ್ಡ್ ನಂ.77 ದತ್ತಾತ್ರೇಯ ದೇವಸ್ಥಾನ ವಾರ್ಡ್‌ನ ಕುಳ್ಳ ಪಾರ್ಕ್ ರಾಜಶೇಖರ್ ಕ್ರೀಡಾಂಗಣದಲ್ಲಿ ಕೆಪಿ ಬಾಯ್ಸ್ ವತಿಯಿಂದ ಆಯೋಜಿಸಲಾಗಿದ್ದ ವಿರಾಟ್ ಕಪ್ ಕ್ರಿಕೆಟ್ ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮತ್ತು ವ್ಯಾಯಾಮಗಳು ಅತ್ಯಂತ ಅಗತ್ಯವಾಗಿದ್ದು, ಯುವಜನತೆಯಲ್ಲಿ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa