ವಿಷನ್–ಮಿಷನ್’ ಶಿಕ್ಷಣ ಸಮ್ಮೇಳನಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ
ಬೆಂಗಳೂರು, 18 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಇಂದು ಆಯೋಜಿಸಲಾಗಿದ್ದ ‘ವಿಷನ್–ಮಿಷನ್’ ಶಿಕ್ಷಣ ಸಮ್ಮೇಳನವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇ
Conference


ಬೆಂಗಳೂರು, 18 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಇಂದು ಆಯೋಜಿಸಲಾಗಿದ್ದ ‘ವಿಷನ್–ಮಿಷನ್’ ಶಿಕ್ಷಣ ಸಮ್ಮೇಳನವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ವಿದ್ಯಾರ್ಥಿ ಕೇಂದ್ರಿತ ಹಾಗೂ ಭವಿಷ್ಯಮುಖಿ ಶಿಕ್ಷಣ ವ್ಯವಸ್ಥೆ ನಿರ್ಮಾಣವೇ ಸರ್ಕಾರದ ಗುರಿಯಾಗಿದ್ದು, ಕಳೆದ ಎರಡೂವರೆ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿ ಸ್ನೇಹಿ ಸುಧಾರಣೆಗಳಾದ ಮೂರು ಪರೀಕ್ಷಾ ಪದ್ಧತಿ ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳ ಮೇಲೆ ಇರುವ ಅತಿಯಾದ ಒತ್ತಡವನ್ನು ಕಡಿಮೆ ಮಾಡಲಾಗಿದೆ. ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ವಿವರಿಸಿದರು.

ಎಸ್‌.ಎಸ್‌.ಎಲ್‌.ಸಿ ಮತ್ತು ಪಿಯುಸಿ ತೇರ್ಗಡೆ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನು ಒದಗಿಸಿದ್ದು, ಅವರ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು. ಅಲ್ಲದೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸುವ ಮೂಲಕ ಆಡಳಿತಾತ್ಮಕ ಜಟಿಲತೆ ಕಡಿಮೆ ಮಾಡಲಾಗಿದೆ ಎಂದರು.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಮಾಡಿರುವುದಾಗಿ ಅವರು ತಿಳಿಸಿದರು.

ಈ ಮಹತ್ವದ ಶಿಕ್ಷಣ ಸುಧಾರಣೆಗಳನ್ನು ಗುರುತಿಸಿ, ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಸಚಿವ ಮಧು ಬಂಗಾರಪ್ಪ ಅವರಿಗೆ ‘ಶಿಕ್ಷಣ ಬಂಗಾರ’ (ಶಿಕ್ಷಣ ಇಲಾಖೆಯ ಬಂಗಾರದ ಮನುಷ್ಯ) ಎಂಬ ಗೌರವಯುತ ಬಿರುದನ್ನು ನೀಡಿ ಸನ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande