ಎಸ್ಸಿ, ಎಸ್ಟಿ ಅಲೆಮಾರಿ ಸಮುದಾಯದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ
ಕೊಪ್ಪಳ, 19 ಜನವರಿ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ಮತ್ತು 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ. ಕೊಪ್ಪಳದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮ
ಎಸ್ಸಿ, ಎಸ್ಟಿ ಅಲೆಮಾರಿ ಸಮುದಾಯದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ


ಕೊಪ್ಪಳ, 19 ಜನವರಿ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ಮತ್ತು 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ.

ಕೊಪ್ಪಳದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ (09-12-2025ರಂದು) ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ 2024-25 ಮತ್ತು 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಎಲ್ಲಾ ಯೋಜನೆಗಳಿಗೆ ನಿಗದಿಪಡಿಸಿದ ಭೌತಿಕ ಗುರಿಗಳಿಗನುಸಾರವಾಗಿ ಆಯ್ಕೆಮಾಡಲಾಗಿರುತ್ತದೆ.

ಈ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಛೇರಿಯ ನೋಟೀಸ್ ಬೋರ್ಡ್‍ಗೆ ಅಂಟಿಸಲಾಗಿರುತ್ತದೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣ www.koppal.nic.in ಅಥವಾ https://koppal.nic.in/en/regarding-submission-of-objections-if-any-from-the-public-on-the-provisional-selection-list-for-scheme-wise-direct-loan-self-reliance-sarathi-entrepreneurship-ganga-kalyana-micro-credit-sche/ ರಲ್ಲಿ ಕೂಡಾ ವಿಕ್ಷೀಸಬಹುದಾಗಿದೆ.

ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಾರ್ವಜನಿಕರಿಂದ ದೂರುಗಳೇನಾದರೂ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜನವರಿ 23ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಛೇರಿಗೆ ಸಲ್ಲಿಸಬೇಕು. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande