ಕನಿಷ್ಠ ಬೆಂಬಲ ಯೋಜನೆಯಡಿ ಬಿಳಿ ಜೋಳ ಖರೀದಿ
ಬಳ್ಳಾರಿ, 19 ಜನವರಿ (ಹಿ.ಸ.) : ಆ್ಯಂಕರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಬೆ
ಕನಿಷ್ಠ ಬೆಂಬಲ ಯೋಜನೆಯಡಿ ಬಿಳಿ ಜೋಳ ಖರೀದಿ


ಬಳ್ಳಾರಿ, 19 ಜನವರಿ (ಹಿ.ಸ.) :

ಆ್ಯಂಕರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿಜೋಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

ಬೆಂಬಲ ಬೆಲೆ:

ಬಿಳಿ ಜೋಳ-ಹೈಬ್ರೀಡ್ : ರೂ.3,699 (ಪ್ರತಿ ಕ್ವಿಂ)

ಬಿಳಿ ಜೋಳ-ಮಾಲ್ದಂಡಿ : ರೂ.3,749 (ಪ್ರತಿ ಕ್ವಿಂ)

ಖರೀದಿ ಕೇಂದ್ರಗಳ ವಿವರ:

ಬಳ್ಳಾರಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಬಳ್ಳಾರಿ ಮತ್ತು ಮೋಕಾ, ಅಸುಂಡಿ, ರೂಪನಗುಡಿ, ಅಮರಾಪುರ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕುರುಗೋಡು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು, ಕರೂರು, ಹಚ್ಚೋಳ್ಳಿ, ಬೂದುಗುಪ್ಪ, ಬಿ.ಎಂ.ಸೂಗೂರು, ತಾಳೂರು, ಮುದ್ದಟನೂರು, ಅರಳಿಗನೂರು, ಸಿರಿಗೇರಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕಂಪ್ಲಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಕಂಪ್ಲಿ ಮತ್ತು ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ರೈತರು ಮೇಲ್ಕಂಡ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಇಲಾಖೆಯಿಂದ ಪಡೆದಿರುವ ಫ್ರೂಟ್ಸ್ ಐ.ಡಿ ಮತ್ತು ಆಧಾರ್ ನೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಬಿಳಿಜೋಳ /ಬೀಜೋತ್ಪಾದನೆ ಬೆಳೆಗಳನ್ನು ಬೆಳೆದಿದ್ದು, ಜೋಳವೆಂದು ನಮೂದಿಸಿಕೊಂಡು ಜೋಳ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿದಲ್ಲಿ ಅಥವಾ ಅಕ್ರಮ ಜೋಳ ನೋಂದಣಿ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande