ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ
ಬಳ್ಳಾರಿ, 19 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ವತಿಯಿಂದ 2024- 25 ನೇ ಸಾಲಿನ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ) ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಗ್ರಾಪಂ ಗಳಿಂದ ಅರ್ಜಿ ಆ
ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ


ಬಳ್ಳಾರಿ, 19 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ವತಿಯಿಂದ 2024- 25 ನೇ ಸಾಲಿನ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ) ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಗ್ರಾಪಂ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಬಳ್ಳಾರಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯಿತಿಗೆ ರೂ.25,000 ಗಳಂತೆ ಪ್ರಶಸ್ತಿ ನೀಡಲು ಆದೇಶವಿದ್ದು, ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಸ್ತಾವನೆಗಳನ್ನು ಸಲ್ಲಿಸಲು ಜ.31 ರಂದು ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಅಥವಾ ದೂ.08392-241373 ಗೆ ಸಂರ್ಪಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande