
ವಿಜಯಪುರ, 19 ಜನವರಿ (ಹಿ.ಸ.) :
ಆ್ಯಂಕರ್ : ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಪಾಲನೆಗಾಗಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ವಿಜಯಪುರ ನಗರದಲ್ಲಿ ವಿಭಿನ್ನ ರೀತಿಯ ಜಾಗೃತಿ ಅಭಿಯಾನ ನಡೆಸಿದರು.
ಈ ವೇಳೆ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂವು ನೀಡಿ, ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವಂತೆ ಮನವಿ ಮಾಡಲಾಯಿತು.
ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಣೆಯ ಮಹತ್ವ ಮತ್ತು ಸಂಚಾರಿ ನಿಯಮಗಳ ಅಗತ್ಯತೆಯನ್ನು ಸವಾರರಿಗೆ ವಿವರಿಸಿದರು.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದು, ಎಲ್ಲರೂ ತಮ್ಮ ಹಾಗೂ ಇತರರ ಸುರಕ್ಷತೆಗಾಗಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande