ಫುಟ್‍ಪಾತ್ ಅತಿಕ್ರಮಣ ತೆರವುಗೊಳಿಸಲು ಸೂಚನೆ
ಕೊಪ್ಪಳ, 19 ಜನವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ವ್ಯಾಪಾರಸ್ಥರು ಅತಿಕ್ರಮಿಸಿಕೊಂಡಿರುವ ಫುಟ್‍ಪಾತ್ ತೆರವುಗೊಳಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಿವಿಧ ವ್ಯಾಪಾರ ವಹಿವಾಟು
ಫುಟ್‍ಪಾತ್ ಅತಿಕ್ರಮಣ ತೆರವುಗೊಳಿಸಲು ಸೂಚನೆ


ಕೊಪ್ಪಳ, 19 ಜನವರಿ (ಹಿ.ಸ.) :

ಆ್ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ವ್ಯಾಪಾರಸ್ಥರು ಅತಿಕ್ರಮಿಸಿಕೊಂಡಿರುವ ಫುಟ್‍ಪಾತ್ ತೆರವುಗೊಳಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಿವಿಧ ವ್ಯಾಪಾರ ವಹಿವಾಟು ವ್ಯಾಪಾರಸ್ಥರು ನಗರದಲ್ಲಿರುವ ಪ್ರಮುಖ ರಸ್ತೆಗಳಲ್ಲಿ ಬೀದಿ ಬದಿ ವಿವಿಧ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಫುಟ್‍ಪಾತ್ ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಪಾದಾಚಾರಿಗಳಿಗೆ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಿರುತ್ತದೆ.

ಈ ಕುರಿತಂತೆ ಸಂಬಂಧಿಸಿದ ವ್ಯಾಪಾರಸ್ಥರಿಗೆ ಈಗಾಗಲೇ ಸಾಕಷ್ಟು ಬಾರಿ ಸೂಚನೆಗಳನ್ನು ನೀಡಲಾಗಿದೆ ಹಾಗೂ ಪತ್ರಿಕಾ ಪ್ರಕಟಣೆಯ ಮೂಲಕ ಮತ್ತು ಧ್ವನಿವರ್ದಕಗಳ ಮೂಲಕವು ಸಹ ಪ್ರಚಾರಪಡಿಸಲಾಗಿರುತ್ತದೆ. ಅಲ್ಲದೇ ಕರಪತ್ರಗಳನ್ನು ಮುದ್ರಿಸಿ ಹಂಚಲಾಗಿರುತ್ತದೆ. ಆದಾಗ್ಯೂ ಕೆಲವು ವ್ಯಾಪಾರಸ್ಥರು ಇಲ್ಲಿಯವರೆಗೆ ಫುಟಪಾತ್ ತೆರವುಗೊಳಿಸಿಕೊಂಡಿರುವುದಿಲ್ಲ.

ನಗರದಲ್ಲಿ ಫುಟಪಾತ್ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಜನವರಿ 16 ರಿಂದ ಪ್ರಾರಂಭಿಸಲಾಗಿದ್ದು, ಕೊಪ್ಪಳ ನಗರದಲ್ಲಿರುವ ಪ್ರಮುಖ ರಸ್ತೆಗಳಲ್ಲಿನ ಫುಟ್‍ಪಾತ್ ಅತಿಕ್ರಮಣ ಮಾಡಿಕೊಂಡಿರುವುದನ್ನು ವ್ಯಾಪಾರಸ್ಥರು ಎರಡು ದಿವಸಗಳೊಳಗಾಗಿ ತೆರವುಗೊಳಿಸಿಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ನಿಯಮಾನುಸಾರ ಮುಂದಿನ ಕ್ರಮವಹಿಸಲಾಗುವುದೆಂದು ಕೊಪ್ಪಳ ನಗರಸಭೆ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande