ಎನ್‌ಡಿಆರ್‌ಎಫ್ ಸ್ಥಾಪನಾ ದಿನ ; ಸಿಬ್ಬಂದಿಗೆ ಅಮಿತ್ ಶಾ ಶುಭಾಶಯ
ನವದೆಹಲಿ, 19 ಜನವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸ್ಥಾಪನಾ ದಿನದ ಅಂಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ವಿಪತ್ತು-ನಿರ
Ndrf


ನವದೆಹಲಿ, 19 ಜನವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸ್ಥಾಪನಾ ದಿನದ ಅಂಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ವಿಪತ್ತು-ನಿರೋಧಕ ಭಾರತವನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಎನ್‌ಡಿಆರ್‌ಎಫ್ ಮಹತ್ವದ ಪಾತ್ರ ವಹಿಸಿದೆ ಎಂದು ಶ್ಲಾಘಿಸಿದ್ದಾರೆ. ಇಂದು ವಿಪತ್ತುಗಳ ಸಂದರ್ಭದಲ್ಲಿ ದೇಶವು ಭರವಸೆಯಿಂದ ಅವಲಂಬಿಸುವ ನಂಬಿಕೆಯ ಆಧಾರಸ್ತಂಭವಾಗಿ ಎನ್‌ಡಿಆರ್‌ಎಫ್ ಹೊರಹೊಮ್ಮಿದೆ ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

ಪ್ರಾಣಾಪಾಯವನ್ನು ಲೆಕ್ಕಿಸದೆ, ಇತರರ ಜೀವ ಮತ್ತು ಸುರಕ್ಷತೆಯನ್ನು ರಕ್ಷಿಸುವುದಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವ ಎನ್‌ಡಿಆರ್‌ಎಫ್ ಸಿಬ್ಬಂದಿಯ ಸೇವಾಭಾವವನ್ನು ಗೃಹ ಸಚಿವರು ಪ್ರಶಂಸಿಸಿದ್ದು, ಕರ್ತವ್ಯದ ಮಾರ್ಗದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ನಮನಗಳನ್ನು ಅರ್ಪಿಸಿದ್ದಾರೆ.

ವಿಪತ್ತು ನಿರ್ವಹಣೆ, ರಕ್ಷಣಾ ಕಾರ್ಯಾಚರಣೆ ಹಾಗೂ ಮಾನವೀಯ ಸೇವೆಯಲ್ಲಿ ಎನ್‌ಡಿಆರ್‌ಎಫ್ ತೋರಿರುವ ಶೌರ್ಯ ಮತ್ತು ವೃತ್ತಿಪರತೆ ದೇಶದ ಹೆಮ್ಮೆ ಎಂದು ಅಮಿತ್ ಶಾ ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande