
ಬಳ್ಳಾರಿ, 19 ಜನವರಿ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಅದೂ, ಪೋಕ್ಸೋ ಸಂತ್ರಸ್ತೆಯ ಮಾಹಿತಿಯನ್ನು ಬಹಿರಂಗಪಡಿಸಿದ್ದಕ್ಕಾಗಿ.
ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ನಡೆದ ಬಿಜೆಪಿಯ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವಾಗ ಬಿ. ಶ್ರೀರಾಮುಲು ಅವರು, ಪೋಕ್ಸೋ
ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದರು. ಕಾರಣ ಬಳ್ಳಾರಿಯ ಮಹಿಳಾ ಠಾಣೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ
ಮಹಮ್ಮದ್ ರಫಿ ಅವರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್