
ಕೊಪ್ಪಳ, 19 ಜನವರಿ (ಹಿ.ಸ.) :
ಆ್ಯಂಕರ್ : ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಬಿ.ಎ. 5ನೇ ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಕ್ಷತಾ ನಾಗದೇವಿ ಎ ಇವರು ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳದ ಪ್ರತಿನಿಧಿಯಾಗಿ ಜನೆವರಿ 2026ರ ರಾಜ್ಯಗಣರಾಜ್ಯೋತ್ಸವದಲ್ಲಿ ಎನ್.ಎಸ್.ಎಸ್. ಪಥಸಂಚಲನಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.
ಸದರಿ ವಿದ್ಯಾರ್ಥಿನಿಗೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳು, ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್