ನಾಳೆ ಅಂಬಾದೇವಿ ಮಹಾರಥೋತ್ಸವ
ರಾಯಚೂರು, 02 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಸಿಂಧನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಂಬಾ ಮಹೋತ್ಸವ-2026ರ ಭಕ್ತಿ ಶಕ್ತಿ ಪರಂಪರೆಯ ದಿವ್ಯ ಸಂಗಮ ಜಾತ್ರಾ ಮಹೋತ್ಸವ ಹಾಗೂ ಸಿಂಧನೂರು ವಿಧಾನಸಭಾ ಕ್
ನಾಳೆ ಅಂಬಾದೇವಿ ಮಹಾರಥೋತ್ಸವ


ರಾಯಚೂರು, 02 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಸಿಂಧನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಂಬಾ ಮಹೋತ್ಸವ-2026ರ ಭಕ್ತಿ ಶಕ್ತಿ ಪರಂಪರೆಯ ದಿವ್ಯ ಸಂಗಮ ಜಾತ್ರಾ ಮಹೋತ್ಸವ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಸಮಾರಂಭವು ಜನವರಿ 3ರ ಮಧ್ಯಾಹ್ನ 3 ಗಂಟೆಗೆ ಅಂಬಾದೇವಿ ಮಠದ ಆವರಣದಲ್ಲಿ ನಡೆಯಲಿದೆ.

ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಲ. ಜಾರಕಿಹೊಳಿ, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಐಟಿ ಮತ್ತು ಬಿಟಿ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಶಿವರಾಜ ಎಸ್.ತಂಗಡಗಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.

ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ವೆಂಕನಗೌಡ (ಬಾಬುಗೌಡ) ಬಾದರ್ಲಿ, ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಂಗನಗೌಡ, ಸೋಮಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೇಣುಕಮ್ಮ ಹುಸೇನಪ್ಪ ಮನ್ನಾಪುರ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾದ ಎಂ.ದೊಡ್ಡಬಸವರಾಜ, ಟಿಎಪಿಸಿಎಮ್‍ಎಸ್ ಅಧ್ಯಕ್ಷರಾದ ಶರಣಪ್ಪ ರಡ್ಡೇರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಅಧ್ಯಕ್ಷರಾದ ಅನಿಲ್‍ಕುಮಾರ ವೈ. ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ, ಬಳ್ಳಾರಿ ಲೋಕಸಭಾ ಕ್ಷೇತ್ರ ಸದಸ್ಯರಾದ ಇ. ತುಕಾರಾಂ, ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ, ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ರಾಮದುರ್ಗ ಶಾಸಕರಾದ ಅಶೋಕ ಎಂ. ಪಟ್ಟಣ, ಬೈಲಹೊಂಗಲ ಶಾಸಕರಾದ ಮಹಾಂತೇಶ ಎಸ್. ಕೌಜಲಗಿ, ಸಿರಗುಪ್ಪ ಶಾಸಕರಾದ ಶಾಸಕರಾದ ಬಿ.ಎಂ.ನಾಗರಾಜ, ಕೂಡ್ಲಿಗಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ, ಕಂಪ್ಲಿ ಶಾಸಕರಾದ ಜೆ.ಎನ್. ಗಣೇಶ, ಬಳ್ಳಾರಿ ನಗರ ಶಾಸಕರಾದ ಎನ್. ಭರತ್‍ರೆಡ್ಡಿ ಅವರು ಭಾಗಿಯಾಗಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಪುಟ್ಟಮಾದಯ್ಯ ಎಂ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಭಾಗಿಯಾಗಲಿದ್ದಾರೆ.

ಸಂಜೆ 5ಗಂಟೆಗೆ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿ ನಡೆಯಲಿದೆ. ಬಳಿಕ ಸರಿಗಮಪ ಖ್ಯಾತಿಯ ಗಾಯಕರಾದ ಸುಪ್ರೀತ್ ಹಾಗೂ ಪೃಥ್ವಿ ಭಟ್ ಅವರಿಂದ ಸಂಗೀತ ಗಾಯನ, ನರಸಿಂಹ ಜೋಶಿ ಮತ್ತು ಶ್ರೀಮತಿ ಇಂದುಮತಿ ಸಾಲಿಮಠ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ, ಸ್ಥಳೀಯ ಶಾಲಾ-ಕಾಲೇಜು ತಂಡಗಳಿಂದ ಸಾಂಸ್ಕøತಿಕ ನೃತ್ಯ ಕಾರ್ಯಕ್ರಮ ಹಾಗೂ ನಾರಾಯಣಪ್ಪ ಮಾಡಸಿರವಾರ ತಂಡದವರಿಂದ ಅಹೋರಾತ್ರಿ ತತ್ವಪದ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande